ಅತಿರಾತ್ರ ಸೋಮಯಾಗ ಯಶಸ್ಸಿಗೆ ದೇವಾಲಯಗಳಲ್ಲಿ ಪ್ರಾರ್ಥನೆ
0
ಫೆಬ್ರವರಿ 10, 2019
ಉಪ್ಪಳ: ಕೊಂಡೆವೂರಿನ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಮತ್ತು ಯಾಗ ಸಮಿತಿಯ ಪದಾಧಿಕಾರಿಗಳು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಾಗಣೆಯ ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಅಂಬಾರು ಶ್ರೀ ಸದಾಶಿವ ದೇವಸ್ಥಾನ, ಸೀರೆ ಶ್ರೀ ಶಂಕರನಾರಾಯಣ ದೇವಸ್ಥಾನ ಶಿರಿಯ ಮತ್ತು ಮಂಜೇಶ್ವರದ ಶ್ರೀ ಮದನಂತೇಶ್ವರ ದೇವಾಲಯಗಳಿಗೆ ಭೇಟಿ ನೀಡಿ ಫೆ.18 ರಿಂದ 24ರ ವರೆಗೆ ನಡೆಯಲಿರುವ ವಿಶ್ವಜಿತ್ ಅತಿರಾತ್ರ ಸೋಮಯಾಗದ ಸಂಪೂರ್ಣ ಯಶಸ್ಸಿಗೆ ಶ್ರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಯಜ್ಞೇಶ್ವರನಿಗೆ ಸಮರ್ಪಿಸಲಾಗುವ ಕುಟ್ಟಿದ ಸಾವಯವ ಅಕ್ಕಿಯನ್ನು ಶ್ರೀ ದೇವರ ಒಂದು ಹೊತ್ತಿನ ನೈವೇದ್ಯಕ್ಕೆ ಇದೇ ಸಂದರ್ಭದಲ್ಲಿ ಸಮರ್ಪಿಸಲಾಯಿತು.