ಕುಂಟಾರು ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ
0
ಮಾರ್ಚ್ 03, 2019
ಮುಳ್ಳೇರಿಯ: ಕುಂಟಾರು ಶ್ರೀ ಮಹಾವಿಷ್ಣುಮೂರ್ತಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವ ಮಾ.29ರಿಂದ 31ರ ತನಕ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ಶ್ರೀಕ್ಷೇತ್ರದಲ್ಲಿ ನಡೆಯಿತು.
ಬ್ರಹ್ಮಶ್ರೀ ರವೀಶ ತಂತ್ರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಸೇವಾ ಸಮಿತಿ ಅಧ್ಯಕ್ಷ ಪದ್ಮನಾಭ ಭಟ್.ಯು ಅಧ್ಯಕ್ಷತೆ ವಹಿಸಿದ್ದರು. ಜಗದೀಶ್ ಮಾಸ್ಟರ್, ಜಯರಾಮ ಭಟ್, ರಾಧಾಕೃಷ್ಣ, ಶ್ರೀ ವಿದ್ಯಾ, ಶ್ರೀಧರನ್.ಕೆ, ಕೆ.ವಿ.ಚಂದು, ಸುಧೀಶ್, ಲತೀಶ ಕುಂಟಾರು, ಪ್ರಭಾಕರ, ಬಾಲಕೃಷ್ಣ ಮಾಯಿಲಂಕೋಟೆ, ಬಾಬು ಕಟ್ಟತ್ತಬೈಲ್, ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಕಾಶ.ಯಂ ಸ್ವಾಗತಿಸಿ, ವಂದಿಸಿದರು.