ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ಸೇವಾಸಮಿತಿಯ ನೇತೃತ್ವದಲ್ಲಿ ಪೆರಡಾಲ ಶ್ರೀ ಉದನೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆದುಬರುತ್ತಿರುವ ಶತರುದ್ರಾಭಿಷೇಕ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬಲಿವಾಡು ಕೂಟವು ಮೇ.1ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ನಡೆಯಲಿರುವುದು.
ಬೆಐiಗ್ಗೆ 8.30ಕ್ಕೆ ಶ್ರೀ ದೇವರಿಗೆ ಶತರುದ್ರಾಭಿಷೇಕ ಪ್ರಾರಂಭ, 9 ಗಂಟೆಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಧ್ಯಾಹ್ನ ಮಹಾಮಂಗಳಾರತಿ, ಮಹಾಪೂಜೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತಾದಿಗಳು ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.