ಉಪ್ಪಳ: ಪೈವಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಕ್ಷಾಮ ತೀವ್ರವಾಗಿದ್ದರೂ ಗ್ರಾಮ ಪಂಚಾಯತಿ ಆಡಳಿತ ಮೌನ ವಹಿಸಿದ ಹಿನ್ನೆಲೆಯಲ್ಲಿ ಬಿಜೆಪಿ, ಯುವ ಮೋರ್ಚಾ, ಮಹಿಳಾ ಮೋರ್ಚಾ ಆಶ್ರಯದಲ್ಲಿ ಇಂದು (ಏ.30 ರಂದು) ಪೈವಳಿಕೆ ಗ್ರಾಮ ಪಂಚಾಯತಿ ಮುಂದೆ ಧರಣಿ ನಡೆಸಲು ತೀರ್ಮಾನಿಸಿದೆ. ಬೆಳಿಗ್ಗೆ 10 ಗಂಟೆಗೆ ಧರಣಿ ನಡೆಯಲಿದೆ.
ಗ್ರಾಮ ಪಂಚಾಯತಿಯಲ್ಲಿ ದಿನ ನಿತ್ಯದ ಉಪಯೋಗಕ್ಕೂ, ಕುಡಿಯುವುದಕ್ಕೂ ನೀರಿಗೆ ತತ್ವಾರವುಂಟಾಗಿದ್ದರೂ ಇದುವರೆಗೂ ಸಮರ್ಪಕವಾಗಿ ನೀರು ವಿತರಿಸಲು ಪಂಚಾಯತಿ ಕ್ರಮ ತೆಗೆದುಕೊಳ್ಳದಿರುವುದನ್ನು ಪ್ರತಿಭಟಿಸಿ ಧರಣಿ ನಡೆಸಲಿದೆ ಎಂದು ಬಿಜೆಪಿ ಪೈವಳಿಕೆ ಪಂಚಾಯತಿ ಸಮಿತಿ ಅಧ್ಯಕ್ಷ ಸದಾಶಿವ ಚೇರಾಲು, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಆಟಿಕುಕ್ಕೆ ತಿಳಿಸಿದ್ದಾರೆ.