ನವದೆಹಲಿ: ಮತಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ವಿವಿಪ್ಯಾಟ್ ಎಣಿಕೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲು ವಿಪಕ್ಷಗಳು ಸಜ್ಜುಗೊಂಡಿವೆ.
ಕಾಂಗ್ರೆಸ್, ತೆಲುಗುದೇಶಂ, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಕಮ್ಯುನಿಸ್ಟ್ ಪಕ್ಷಗಳು ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಶೇ.50 ರಷ್ಟು ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಬೇಕೆಂಬ ತಮ್ಮ ಹಳೆಯ ಬೇಡಿಕೆಯನ್ನು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮುಂದಿಡಲು ಸಜ್ಜುಗೊಂಡಿವೆ.
ಬಿಜೆಪಿ ಮತಯಂತ್ರಗಳನ್ನು ಪ್ರೋಗ್ರಾಮಿಂಗ್ ಮಾಡಿದೆ ಎಂದು ಆರೋಪಿಸಿದ್ದರೆ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಶೇ.50 ರಷ್ಟು ವಿವಿಪ್ಯಾಟ್ ಗಳನ್ನು ಎಣಿಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಈ ಹಿಂದೆ ವಿವಿಪ್ಯಾಟ್ ಎಣಿಕೆಯನ್ನು ಹೆಚ್ಚಿಸುವುದಕ್ಕೆ ಸಮ್ಮತಿಸಿದ್ದ ಸುಪ್ರೀಂ ಕೋರ್ಟ್ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದರ ಬದಲು 5 ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಸ್ಯಾಂಪಲ್ ಎಣಿಕೆ ಮಾಡುವಂತೆ ಆಯೋಗಕ್ಕೆ ಸೂಚನೆ ನೀಡಿತ್ತು. ಆದರೆ ಶೇ.50 ರಷ್ಟು ವಿವಿಪ್ಯಾಟ್ ಎಣಿಕೆ ಮಾಡಬೇಕೆಂದು ಪಟ್ಟು ಹಿಡಿದಿದ್ದ ವಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿತ್ತು.