ಮಧೂರು: ಕುಂಬಳೆಸೀಮೆಯ ಪ್ರಧಾನ ನಾಲ್ಕು ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀಮದನಂತೇಶ್ವರ ಸಿದ್ದಿವಿನಾಯಕ ದೇವಾಲಯದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭಾನುವಾರ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿವಿಧ ವೈಧಿಕ ವಿಧಿವಿಧಾನಗಳು, ಭಜನಾ ಸಂಕೀರ್ತನೆಗಳು ನಡೆಯಿತು. ಶ್ರೀಕ್ಷೇತ್ರದಲ್ಲಿ ನವೀಕರಣ ಪ್ರಕ್ರಿಯೆಗಳು ಚುರುಕಿನಿಂದ ನಡೆಯುತ್ತಿರುವುದರಿಂದ ಪ್ರಸ್ತುತ ವರ್ಷ ಧಾರ್ಮಿಕ, ವೈದಿಕ ವಿಧಿವಿಧಾನಗಳು ಮಾತ್ರ ಆಯೋಜಿಸಲಾಗಿದ್ದು, ಏ.18 ರಂದು ಉತ್ಸವ ಸಮಾರೋಪಗೊಳ್ಳಲಿದೆ.