ವಯನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ
0
ಏಪ್ರಿಲ್ 04, 2019
ಮಾನಂದವಾಡಿ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷರ ದಕ್ಷಿಣ ಭಾರತದ ಸ್ಪರ್ಧೆ ಕೊನೆಗೂ ಅಧಿಕೃತವಾಗಿದ್ದು, ನಿನ್ನೆ ರಾಹುಲ್ ಗಾಂಧಿ ವಯನಾಡಿನಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ವಯನಾಡ್ ಲೋಕಸಭಾ ಕ್ಷೇತ್ರದಿಂದ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಇವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಇದ್ದದ್ದು ವಿಶೇಷವಾಗಿತ್ತು. ರಾಹುಲ್ ಗಾಂಧಿ ವಯನಾಡಿನಲ್ಲಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಕಾವು ಜೋರಾಗಿದೆ.
ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ರೋಡ್ ಶೋ:
ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಕೇರಳ ಕಾಂಗ್ರೆಸ್ ಘಟಕ ಬೃಹತ್ ರ್ಯಾಲಿ ಮತ್ತು ರೋಡ್ ಶೋ ಹಮ್ಮಿಕೊಂಡಿತ್ತು. ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರೋಡ್ ಶೋ ಮೂಲಕ ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು. ಅಲ್ಲದೆ ವಯನಾಡ್ ಡಿಸಿ ಕಚೇರಿವರೆಗೂ ಸಾವಿರಾರು ಮಂದಿ ತೆರಳಿ ರಾಹುಲ್ ಗಾಂಧಿ ಅವರಿಗೆ ಬೆಂಬಲ ಘೋಷಣೆ ಮಾಡಿದರು.