ಕೇರಳದಿಂದ ರಾಹುಲ್ ಗಾಂಧಿ ಸ್ಪರ್ಧೆ: ಸಿಎಂ ಪಿಣರಾಯಿ ವಿಜಯನ್ ಏನಂದು ಗೊತ್ತಾ?!
0
ಏಪ್ರಿಲ್ 01, 2019
ತಿರುವನಂತಪುರಂ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಸಿಪಿಐ (ಎಂ)ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸುತ್ತಿದ್ದಾರೆ. ನಾವು ರಾಹುಲ್ ಗಾಂಧಿ ವಿರುದ್ಧ ಅಭ್ಯರ್ಥಿ ಹಾಕುತ್ತೇವೆ. ರಾಹುಲ್ ಗಾಂಧಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಕ್ಷೇತ್ರದಿಂದ ಕಣಕ್ಕಿಳಿಯಬೇಕಿತ್ತು. ಆದರೆ ಈಗ ಅವರು ಎಡಪಕ್ಷಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸುರಕ್ಷತೆ ದೃಷ್ಟಿಯಿಂದ ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಿತ್ತು. ರಾಹುಲ್ ಗಾಂಧಿಯವರನ್ನು ನಾವೆಲ್ಲರೂ ಒತ್ತಾಯಿಸಿದ್ದು ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.