ಪೆರಡಾಲ ಶ್ರೀಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
0
ಏಪ್ರಿಲ್ 03, 2019
ಬದಿಯಡ್ಕ: ಪೆರಡಾಲ ಶ್ರೀಉದನೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ವರ್ಷಂಪ್ರತಿ ನಡೆಯುವ ಶತರುದ್ರಾಭಿಷೇಕ, ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಹಾಗೂ ಬಲಿವಾಡು ಕೂಟ ಕಾರ್ಯಕ್ರಮ ಮೇ.1 ರಂದು ಸಾಂಪ್ರದಾಯಿಕ ಶ್ರದ್ದಾ ಭಕ್ತಿಗಳಿಂದ ನಡೆಯಲಿದ್ದು, ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ವೆಂಕಟಕೃಷ್ಣ ಮಕ್ಕಿಕ್ಕಾನ ಮಂಗಳವಾರ ಬಿಡುಗಡೆಗೊಳಿಸಿದರು.
ಕ್ಷೇತ್ರದ ಮೊಕ್ತೇಸರರಾದ ಜಗನ್ನಾಥ ರೈ ಪೆರಡಾಲಗುತ್ತು, ವೆಂಕಟರಮಣ ಭಟ್ ಚಂಬಲ್ತಿಮಾರ್, ಕೃಷ್ಣ ಪೆರಡಾಲ, ಜಗದೀಶಪೆರಡಾಲ, ಮಾಜೀ ಆಡಳಿತ ಮೊಕ್ತೇಸರ ನಾರಾಯಣ ಭಟ್ ಪಂಜಿತ್ತಡ್ಕ, ಚಂದ್ರಹಾಸ ರೈ ಪೆರಡಾಲಗುತ್ತು, ಸೇಚವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸೇವಾ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ ರೈ ಅಧ್ಯಕ್ಷತೆ ವಹಿಸಿದ್ದರು. ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಉದಯಶಂಕರ ಪಟ್ಟಾಜೆ ವಂದಿಸಿದರು.