ಮುಳ್ಳೇರಿಯ: ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಅನುತ್ತೀರ್ಣನಾಗಿದ್ದ
ವಿದ್ಯಾರ್ಥಿಯ ಉತ್ತರ ಪತ್ರಿಕೆ ಮರು ಮೌಲ್ಯ ಮಾಪನ ನಡೆಸಲಾಗಿದ್ದು ವಿದ್ಯಾರ್ಥಿ ಉತ್ತೀರ್ಣನಾಗುವುದರೊಂದಿಗೆ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಈ ಹಿಂದೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದಾಗ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 87 ವಿದ್ಯಾರ್ಥಿಗಳಲ್ಲಿ 86ಮಂದಿ ಉತ್ತೀರ್ಣರಾಗಿ ಶಾಲೆಗೆ ಶೇ.98.85 ಫಲಿತಾಂಶ ಲಭಿಸಿತ್ತು. ಇಬ್ಬರು ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಶೇಣಿ ಪಡೆದಿದ್ದರು. ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಮನವಿ ಸಲ್ಲಿಸಿದಂತೆ ಮರು ಮೌಲ್ಯಮಾಪನ ನಡೆಸಲಾಗಿತ್ತು.