ಮುಳ್ಳೇರಿಯ: ತಾಳಿಪಡ್ಪುವಿನ ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ್ ಇದರ ನೇತೃತ್ವದಲ್ಲಿ ಬಂದಡ್ಕ ಶ್ರೀ ರಾಮನಾಥ ದೇವಳ ಟ್ರಸ್ಟ್ ಬಂದಡ್ಕ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು, ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ಸ್ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ ಮೇ 19 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಬಂದಡ್ಕದ ಶ್ರೀ ರಾಮನಾಥ ದೇವಳ ಸಭಾ ಭವನದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲದೆ.
ಶಿಬಿರವನ್ನು ಉಡುಪಿಯ ಪ್ರಸಾದ್ ನೇತ್ರಾಲಯದ ನಿರ್ದೇಶಕ ರಘುರಾಮ ರಾವ್ ಅವರು ಉದ್ಘಾಟಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆಯುವಂತೆ ಸಂಘಟಕರು ವಿನಂತಿಸಿದ್ದಾರೆ. ಶಿಬಿರದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿದ್ದಾರೆ.