ಕಾಸರಗೋಡು: ಹರಿದಾಸ ಜಯಾನಂದ ಕುಮಾರ್ ಷಷ್ಟ್ಯಬ್ಧ ಅಂಗವಾಗಿ ಆಯೋಜಿಸಿದ ಹರಿಕೀರ್ತನಾ ಅಭಿಯಾನದ ಸಮಾರೋಪ ಸಮಾರಂಭ ಜೂನ್ 2 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ವಸಂತ ಮಹಲ್‍ನಲ್ಲಿ ನಡೆಯಲಿದೆ.
ಕಾರ್ಯಕ್ರಮದಂಗವಾಗಿ ಬೆಳಗ್ಗೆ 8 ರಿಂದ 11 ರ ವರೆಗೆ ಹರಿದಾಸ ಜಯಾನಂದ ಕುಮಾರ್ ಅವರಿಂದ ತರಬೇತಿ ಪಡೆದ ಮಹಿಳಾ ತಂಡದಿಂದ ಸಂಕೀರ್ತನೆ ನಡೆಯಲಿದೆ. 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಧಾರ್ಮಿಕ ಮುಂದಾಳು ಬಿ.ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾ„ಕಾರಿ ರಾಜರ್ಷಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸುವರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲದ ಪರಮಪೂಜ್ಯ ಯೋೀಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು. ಕಾರ್ಯಕ್ರಮದಲ್ಲಿ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಅವರು ದಿವ್ಯ ಉಪಸ್ಥಿತರಿರುವರು.
ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ|ಮೋಹನ್ ಆಳ್ವ, ವಿ.ಹಿಂ.ಪ. ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಎಂ.ಬಿ.ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಹರಿಕಥಾ ಪರಿಷತ್ ಅಧ್ಯಕ್ಷ ಮಹಾಬಲ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಉಪಸ್ಥಿತರಿರುವರು ಎಂದು ಪತ್ರಿಕಾಗೋಷ್ಠಿಯಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರು ಹೇಳಿದರು. ಸಭಾ ಕಾರ್ಯಕ್ರಮದ ಬಳಿಕ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರಿಂದ `ಧರ್ಮಸ್ಥಳ ಕ್ಷೇತ್ರ ಮಹಾತ್ಮೆ' ಹರಿಕತೆ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಉದ್ಯಮಿ ರಾಂ ಪ್ರಸಾದ್, ಗುರುಪ್ರಸಾದ್ ಕೋಟೆಕಣಿ ಉಪಸ್ಥಿತರಿದ್ದರು.