ಬದಿಯಡ್ಕ: ಕುಂಟಿಕಾನ ಮಠ ಶ್ರೀಶಂಕರನಾರಾಯಣ ದೇವಸ್ಥಾನದ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಮೇ.9 ರಿಂದ 11ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಮೇ.9 ರಂದ ಬೆಳಿಗ್ಗೆ 8ಕ್ಕೆ ಉಷಃಪೂಜೆ,8.30 ರಿಂದ ಗಣಪತಿಹವನ, 10 ರಿಂದ ರಮ್ಯಶ್ರೀ ಅಂಬಕಾನ ಮತ್ತು ಬಳಗದವರಿಂದ ಭಕ್ತಿಗೀತೆಗಳು, 11 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕ್ಷೇತ್ರ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಆಳ್ವ ಕಳತ್ತೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಸಂತ ಪೈ ಬದಿಯಡ್ಕ ಉಪಸ್ಥಿತರಿರುವರು. ಕೆನರಾ ಬ್ಯಾಂಕ್ ಮಹಾ ಪ್ರಬಂಧಕ ಸುಂದರ ಅವರನ್ನು ಗೌರವಿಸಿ ಸನ್ಮಾನಿಸಲಾಗುವುದು. ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ. ಗ್ರಾ.ಪಂ.ಸದಸ್ಯೆ ಜಯಂತಿ, ಅನಂತಪುರ ಶ್ರೀಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಎಂ.ವಿ.ಮಹಾಲಿಂಗೇಶ್ವರ ಭಟ್, ನಿವೃತ್ತ ಮುಖ್ಯೋಪಾಧ್ಯಾಯ ನರಹರಿ ಮಾಸ್ತರ್ ಕಳತ್ತೂರು ಅತಿಥಿಗಳಾಗಿ ಉಪಸ್ಥಿತರಿರುವರು. ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ. ರಾತ್ರಿ 7 ರಿಂದ ಭಜನೆ, 8.30ರಿಂದ ದೀಪಾಲಂಕಾರ ಸಹಿತ ವಿಶೇಷಕಾರ್ತಿಕಪೂಜೆ ನಡೆಯಲಿದೆ.
ಮೇ.10 ರಂದು ರಾತ್ರಿ 8 ರಿಂದ ಕಾತೀಕಪೂಜೆ, ಶ್ರೀದೈವಗಳ ತೊಡಂಙಲ್, ಅನ್ನದಾನ ನಡೆಯಲಿದೆ. ಮೇ.11 ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12ರ ವರೆಗೆ ಶ್ರೀಉಳ್ಳಾಕ್ಳು ಹಾಗೂ ಧೂಮಾವತಿ ದೈವಗಳ ನೇಮೋತ್ಸವ, ಪ್ರಸಾದ ವಿತರಣೆಯೊಂದಿಗೆ ಉತ್ಸವ ಸಮಾಪ್ತಿಗೊಳ್ಳಲಿದೆ.