ಕುಂಬಳೆ: ಭಾಷಾ ಅಲ್ಪಸಂಖ್ಯಾತ ಪ್ರದೇಶ ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮ ಅಂಗನವಾಡಿ ಅಧ್ಯಾಪಕಿಯರ ಹಾಗು ಸಹಾಯಕಿಯರ ಹಲವು ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮುಂದೆ ಮನವಿ ಮೂಲಕ ಸಲ್ಲಿಸುವುದರೊಂದಿಗೆ ರಾಜ್ಯ ಸರಕಾರದ ಮುಂದೆ ಬೇಡಿಕೆ ಮಂಡಿಸಲಾಗಿದೆ. ಈ ಕುರಿತು ಸಕಾರಾತ್ಮಕ ಸ್ಪಂದನೆ ಲಭಿಸಿದ ಕಾರಣ ಮುಂದೆ ಈ ಕುರಿತು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಬೇಕಾಗಿದೆ.
ಈ ಕುರಿತು ಮೇ 5 ರಂದು ಬೆಳಿಗ್ಗೆ 10 ಗಂಟೆಗೆ ಬೀರಂತಬೈಲಿನ ಕನ್ನಡ ಅಧ್ಯಾಪಕ ಭವನದಲ್ಲಿ ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಕನ್ನಡಿಗರ ಬೃಹತ್ ಸಮಾಲೋಚನಾ ಸಭೆ ನಡೆಯಲಿದೆ. ಪ್ರಸ್ತುತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಅಂಗನವಾಡಿ ಅಧ್ಯಾಪಕಿಯರು ಹಾಗು ಸಹಾಯಕಿಯರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡ ಅಂಗನವಾಡಿ ಅಧ್ಯಾಪಕಿಯರ ಹಾಗು ಸಹಾಯಕಿಯರ ಅಸೋಸಿಯೇಶನ್‍ನ ಅಧ್ಯಕ್ಷೆ ಶೋಭಾ ಕುಂಬಳೆ ಹಾಗು ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮೀ ಕುಂಬಳೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.