ಮುಳ್ಳೇರಿಯ: ಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ಸಂಘಟಕ ಸಮಿತಿ ರಚನೆ ಸಭೆ ಬಂದಡ್ಕ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳವಾರ ಜರಗಿತು.
ಕಾರಡ್ಕ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಓಮನಾ ರಾಮಚಂದ್ರನ್ ಸಭೆ ಉದ್ಘಾಟಿಸಿದರು. ಜಿಲ್ಲಾ ಪಂಚಾಯತಿ ಸದಸ್ಯ ಎಂ.ನಾರಾಯಣನ್ ಅಧ್ಯಕ್ಷತೆ ವಹಿಸಿದ್ದರು. ಸಮಗ್ರ ಶಿಕ್ಷಣ ಜಿಲ್ಲಾ ಯೋಜನೆ ಅಧಿಕಾರಿ ಪಿ.ಪಿ.ವೇಣುಗೋಪಾಲ್ ಕಾರ್ಯಕ್ರಮದ ಮಾಹಿತಿ ನೀಡಿದರು. ಸಾರ್ವಜನಿಕ ಶಿಕ್ಷಣ ಸಂರಕ್ಷಣೆ ಯಜ್ಞದ ಜಿಲ್ಲಾ ಸಂಚಾಲಕ ಪಿ.ದಿಲೀಪ್ ಕುಮಾರ್ ಚರ್ಚೆಗಳ ಕ್ರೋಡೀಕರಣ ನಡೆಸಿದರು.
ಕುತ್ತಿಕೋಲ್ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಿಸಿ ಪಿ.ಜೆ., ಹೈಯರ್ ಸೆಕೆಂಡರಿ ಪ್ರಾಂಶುಪಾಲೆ ಕೆ.ಕೆ.ಗಿರಿಜಾ, ಬ್ಲಾಕ್ ಪಂಚಾಯತಿ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು, ಸದಸ್ಯರು, ಕುಟುಂಬಶ್ರೀ ಸದಸ್ಯರು, ಕಲಾ-ಸಾಂಸ್ಕøತಿಕ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ಶಿಕ್ಷಣಾಧಿಕಾರಿ ಎನ್.ನಂದಿಕೇಶನ್ ಸ್ವಾಗತಿಸಿ, ಶಾಲೆಯ ಮುಖ್ಯಶಿಕ್ಷಕಿ ಕೆ.ವೀನಾ ವಂದಿಸಿದರು.
ಸಂಘಟಕ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಅವರನ್ನು ಆರಿಸಲಾಯಿತು. ವಿವಿಧ ಉಪಸಮಿತಿಗಳ ರಚನೆ ನಡೆಯಿತು.