ಬದಿಯಡ್ಕ: ಏತಡ್ಕದ ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ವಾರ್ಷಿಕ ಮಹಾಸಭೆಯು ಏತಡ್ಕ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಜರಗಿತು. ಅಧ್ಯಕ್ಷ ಕೆ.ನರಸಿಂಹ ಭಟ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯದರ್ಶಿ ಕೆ.ಸುಬ್ರಹ್ಮಣ್ಯ ಭಟ್ 2018-19ರ ವರದಿ,ಲೆಕ್ಕ ಪತ್ರಗಳನ್ನು ಮಂಡಿಸಿದರು.ಅವುಗಳನ್ನು ಅಂಗೀಕರಿಸಲಾಯಿತು.2019-20ರ ಬಜೆಟ್ ಮಂಡಿಸಿ ಅಂಗೀಕಾರ ಪಡೆಯಲಾಯಿತು.ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಹದಗೆಟ್ಟಿರುವ ಬದಿಯಡ್ಕ-ಏತಡ್ಕ-ಸುಳ್ಯಪದವು ರಸ್ತೆ ಕಾಮಗಾರಿ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಿ ಆ ಕುರಿತು ಠರಾವು ಮಂಡಿಸಲಾಯಿತು. ಉಪಾಧ್ಯಕ್ಷ ವೈ.ಕೆ ಗಣಪತಿ ಭಟ್ ಸ್ವಾಗತಿಸಿ, ಡಾ.ವೇಣುಗೋಪಾಲ ಕಳೆಯತ್ತೋಡಿ ವಂದಿಸಿದರು.
ಗ್ರಾಮ ಸೇವಾ ಸಂಘ ಗ್ರಂಥಾಲಯದ ವಾರ್ಷಿಕ ಮಹಾಸಭೆ
0
ಮೇ 29, 2019