ಉಪ್ಪಳ: ಪ್ರತಾಪನಗರದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಭಾನುವಾರ ಸಂಜೆ ಪ್ರತಾಪನಗರ ಶ್ರೀ ಗೌರೀ ಗಣೇಶ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಈ ವರ್ಷ ನಡೆಯುವ 36ನೇ ವರ್ಷದ ಗಣೇಶೋತ್ಸವವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು. ಉತ್ಸವದ ಯಶಸ್ವಿಗೆ ಸಮಿತಿಯನ್ನು ರೂಪೀಕರಿಸಲಾಯಿತು. ಸಭೆಯಲ್ಲಿ ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪ್ರತಾಪನಗರ ಉತ್ಸವದ ಬಗ್ಗೆ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಪದಾಧಿಕಾರಿಗಳಾದ ಶ್ರೀನಿವಾಸ, ಗಣೇಶ್ ರೈ, ರಮೇಶ ಆಳ್ವ ತಿಂಬರ, ವಿಶ್ವನಾಥ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತೆಯರ ಸಹಿತ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು. ಅನಿಲ್ ಕುಮಾರ್ ಸ್ವಾಗತಿಸಿ, ಅವಿನಾಶ್ ವಂದಿಸಿದರು.
ಪ್ರತಾಪನಗರ ಗಣೇಶೋತ್ಸವ- ಪೂರ್ವಭಾವೀ ಸಭೆ
0
ಮೇ 22, 2019