ಬದಿಯಡ್ಕ : ಅಗಲ್ಪಾಡಿ ಶ್ರೀದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ(ಕಲಭ) ಆಚರಣೆ ಜೂನ್ 1 ರಂದು ಶನಿವಾರ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ರಾತ್ರಿ ವಿಶೇಷ ದೀಪಾರಾಧನಾ ಸೇವೆಯು ನಡೆಯಲಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಲ್ಲ ಶ್ರೀದೇವಳದ ಆಡಳಿತ ಮೊಕ್ತೇಸರ ವಿಷ್ಣು ಭಟ್ ಆನೆಮಜಲು ಇವರ ಅಧ್ಯಕ್ಷತೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಬೆಳಿಗ್ಗೆ 10ಕ್ಕೆ ಭಕ್ತರ ಸಭೆ ನಡೆಯಲಿದೆ.
ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ಅಪರಾಹ್ಣ 2.30ಕ್ಕೆ ಶ್ರೀ ದುರ್ಗಾಕೃಷ್ಣ ಮಕ್ಕಳ ಮೇಳ ಅಗಲ್ಪಾಡಿ, ಜಯನಗರ ಇದರ ಪುಟಾಣಿಗಳಿಂದ ಮೀನಾಕ್ಷಿ ಕಲ್ಯಾಣ ಯಕ್ಷಗಾನ ಬಯಲಾಟವು ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವಳದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ.