ಕಾಸರಗೋಡು: ಕಾಸರಗೋಡಿನ ಕನ್ನಡಿಗರು, ವಿದ್ಯಾರ್ಥಿಗಳು ಮತ್ತು ಉದ್ಯೋಗಾರ್ಥಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಮತ್ತು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕನ್ನಡ ಹೋರಾಟ ಸಮಿತಿಯು ನಾಳೆ(ಮೇ 5) ಬೆಳಿಗ್ಗೆ 10 ಗಂಟೆಗೆ ಕಾಸರಗೋಡು ಬೀರಂತಬೈಲಿನ ಕನ್ನಡ ಅಧ್ಯಾಪಕ ಭವನದಲ್ಲಿ ಆಯೋಜಿಸಿದ ಬೃಹತ್ ಸಭೆಗೆ ಗಮಕ ಕಲಾ ಪರಿಷತ್ ಗಡಿನಾಡ ಘಟಕ ಅಧ್ಯಕ್ಷ ಟಿ.ಶಂಕರನಾರಾಯಣ ಭಟ್ ಅವರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ಕನ್ನಡಿಗರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.