ಕಾಸರಗೋಡು: ಕಾಂಞಂಗಾಡು ಚೆಮ್ಮಟಂವಯಲ್‍ನಲ್ಲಿರುವ ಕಾಸರಗೋಡು ಜಿಲ್ಲಾ ಆಸ್ಪತ್ರೆಯಲ್ಲಿ ಶುದ್ಧ ಜಲಕ್ಷಾಮವನ್ನು ಕೂಡಲೇ ಪರಿಹರಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾಂಞಂಗಾಡು ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಸೋಮವಾರ ಪ್ರತಿಭಟನಾ ಧರಣಿ ನಡೆಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿದರು. ಬಿಜೆಪಿ ಮಂಡಲಾಧ್ಯಕ್ಷ ಎನ್.ಮಧು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜೊತೆ ಕಾರ್ಯದರ್ಶಿ ಎಂ.ಬಾಲರಾಜ್, ಶೋಭನಾ ಎಚ್ಚಿಕಾನಂ, ಕೃಷಿಕ ಮೋರ್ಚಾದ ಜಿಲ್ಲಾಧ್ಯಕ್ಷ ಇ.ಕೃಷ್ಣನ್, ಮನುಲಾಲ್ ಮೇಲತ್ತ್, ಎ.ಕೆ.ಮಾಧವನ್, ಎ.ಕೆ.ಸುರೇಶ್ ಮೊದಲಾದವರು ಭಾಗವಹಿಸಿದ್ದರು.