ಪೆರ್ಲ:ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹ ಸಂಸ್ಥೆ ಪೆರ್ಲ ನಾಲಂದ ಮಹಾವಿದ್ಯಾಲಯದ ವಾರ್ಷಿಕ ಮಹಾಸಭೆ ಹಾಗೂ ದಾನಿಗಳು, ವಿದ್ಯಾಭಿಮಾನಿಗಳ ಸ್ನೇಹ ಮಿಲನ ಕಾಲೇಜು ಸಭಾಭವನದಲ್ಲಿ ಗುರುವಾರ ನಡೆಯಿತು.
ವಿವೇಕಾನಂದ ಸಮೂಹ ಸಂಸ್ಥೆಗಳ ಅಧ್ಯಕ್ಷ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನ ಮನಸ್ಕರು, ಸಾರ್ವಜನಿಕರ ಸಹಕಾರಗಳಿಂದ 69 ಸಹ ಸಂಸ್ಥೆಗಳನ್ನು ಹೊಂದಿದ ವಿದ್ಯಾಸಂಸ್ಥೆ ಸಮಾಜದಲ್ಲಿ ವಿಶೇಶ ಸ್ಥಾನ ಪಡೆದಿದೆ.ಎಲ್ಲಾ ಸಂಸ್ಥೆಗಳಲ್ಲೂ ವಿಧ್ಯಾಭ್ಯಾಸದ ಜೊತೆ ರಾಷ್ಟ್ರೀಯತೆಯನ್ನೂ ಬೆಳೆಸಲು ಒತ್ತು ನೀಡಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು.
ರಾಷ್ಟ್ರೀಯ ಸೇವಾ ಸಂಘದ ಕುಟುಂಬ ಪ್ರಬೋಧನ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾರ್ಗದರ್ಶನ ನೀಡಿದರು. ನಾಲಂದ ಆಡಳಿತ ಮಂಡಳಿ ಅಧ್ಯಕ್ಷ, ಮಲ್ಲ ಶ್ರೀ ದುರ್ಗಾ ಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್, ಪ್ರಾಂಶುಪಾಲ ಡಾ.ವಿಘ್ನೇಶ್ವರ ವರ್ಮುಡಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ.ಜಯಗೋವಿಂದ ಉಕ್ಕಿನಡ್ಕ, ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಲೆಕ್ಕಪತ್ರ ಮಂಡಿಸಿದರು. ನಿರ್ವಹಣಾಧಿಕಾರಿ ಶಿವಕುಮಾರ್ ಕೆ.ಸ್ವಾಗತಿಸಿ, ಶ್ರೀಹರಿ ಭರಣೇಕರ್ ವಂದಿಸಿದರು.