ಕುಂಬಳೆ: ಖ್ಯಾತ ಪ್ರವಾಸಿ ಧಾಮವಾಗಿ ಗುರುತಿಸಿಕೊಂಡಿರುವ, ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮೀ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ದಿನಾಚರಣೆ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಮೇ.8 ರಂದು ಜರಗಿತು.
ಬೆಳಿಗ್ಗೆ ಗಣಪತಿ ಹವನ, ವೇದ ಪಾರಾಯಣ, ಶ್ರೀ ದೇವರಿಗೆ ನವಕ, ಕಲಶಾಭಿಷೇಕಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಶ್ರೀ ಅನಂತಪದ್ಮನಾಭ ಸ್ವಾಮಿ ಮಹಿಳಾ ಮತ್ತು ಮಕ್ಕಳ ಭಜನಾ ಸಂಘಗಳ ಸದಸ್ಯರಿಂದ ಭಜನಾ ಸಂಕೀರ್ತನೆ ಜರಗಿತು.