ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ದಿನಿ ಕ್ಷೇತ್ರದ ಸೇವಾ ಸಮಿತಿಯ ಮಹಾ ಸಭೆಯು ಶನಿವಾರ ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಜರಗಿತು. ಸೇವಾ ಸಮಿತಿಯ ಅಧ್ಯಕ್ಷ ಹಿರಿಯರಾದ ಕುಂಬ್ಡಾಜೆ ತಿಮ್ಮಪ್ಪ ರೈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ ಅವರು ಸ್ವಾಗತಿಸಿ ವರದಿಯನ್ನು ವಾಚಿಸಿದರು. ಕ್ಷೇತ್ರದಲ್ಲಿ ಮುಂದಿನ ವರ್ಷ ನಡೆಯಲಿರುವ ಬ್ರಹ್ಮಕಲಶೋತ್ಸವವನ್ನು ಸಾಂಗವಾಗಿ ನೆರವೇರಿಸಲು ಎಲ್ಲರೂ ಸಹಕರಿಸಬೇಕೆಂದು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಕೃಷ್ಣ ಅಮ್ಮಣ್ಣಾಯ ಪಾವೂರು ತಿಳಿಸಿದರು. ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಸೇವಾ ಸಮಿತಿಯ ಉಪಾಧ್ಯಕ್ಷ ರವೀಂದ್ರ ರೈ ಗೋಸಾಡ ವಿವರಿಸಿದರು. ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ ರೈ ಮಠದ ಮೂಲೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ, ಮಂಗಳೂರಿನ ಖ್ಯಾತ ವಕೀಲ ಪುರುಷೋತ್ತಮ ಭಟ್ ಮಠದಮೂಲೆ ಉಪಸ್ಥಿತರಿದ್ದರು. ಸೇವಾ ಸಮಿತಿಯ ಕೋಶಾಧಿಕಾರಿ ಪರಮೇಶ್ವರ ಭಟ್ ಗೋಸಾಡ ಲೆಕ್ಕಪತ್ರವನ್ನು ಮಂಡಿಸಿದರು. ಸೇವಾ ಸಮಿತಿಯ ಕಾರ್ಯದರ್ಶಿ ಸದಾಶಿವ ರೈ ಗೋಸಾಡ ವಂದಿಸಿದರು.
ಗೋಸಾಡ ಕ್ಷೇತ್ರದ ಸೇವಾ ಸಮಿತಿಯ ಮಹಾ ಸಭೆ
0
ಮೇ 27, 2019