ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಮೇ 23 ರಿಂದ 28 ರ ವರೆಗೆ ಬ್ರಹ್ಮಶ್ರೀ ಅರವತ್ ದಾಮೋದರ ತಂತ್ರಿಯವರ ಮಾರ್ಗದರ್ಶನದಲ್ಲಿ ದ್ರವ್ಯಕಲಶ ಮಹೋತ್ಸವವು ವಿವಿಧ ವೈದಿಕ, ಧಾರ್ಮಿಕ ಹಾಗು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿ, ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಲೋಕಾರ್ಪಣೆಗೊಳಿಸಿ ಸಮಾರಂಭಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಳಿಯಾರು ಕ್ಷೇತ್ರದ ಪ್ರಬಂಧಕ ಸೀತಾರಾಮ ಬಳ್ಳುಳ್ಳಾಯ, ದ್ರವ್ಯ ಕಲಶೋತ್ಸವ ಸಮಿತಿಯ ಅಧ್ಯಕ್ಷ ವೇಣುಗೋಪಾಲ ತತ್ವಮಸಿ, ಕಾರ್ಯದರ್ಶಿ ಗೋಪಾಲನ್ ಮತ್ತು ಸುಕೇಶ್ ಹೊಳ್ಳ ಅವರು ಉಪಸ್ಥಿತರಿದ್ದರು.