ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ದ್ರವ್ಯಕಲಶ ಮಹೋತ್ಸವ ಮೇ 23 ರಿಂದ 28 ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಮೇ 23 ರಂದು ಸಂಜೆ 6.30 ರಿಂದ ಧಾರ್ಮಿಕ-ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ತಂತ್ರಿವರ್ಯರಾದ ಬ್ರಹ್ಮಶ್ರೀ ಅರವತ್ ದಾಮೋದರ ತಂತ್ರಿಗಳು ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಕೆ.ಸಿ.ಮಾನವ ವರ್ಮ ರಾಜ ಅಳ್ಳಡ ಸ್ವರೂಪಂ ನೀಲೇಶ್ವರ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಉದ್ಯಮಿ ವಸಂತ ಪೈ ಬದಿಯಡ್ಕ ಭಾಗವಹಿಸುವರು.
ಮುಳಿಯಾರು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎನ್.ಸುಬ್ರಾಯ ಬಳ್ಳುಳ್ಳಾಯ, ಆಲಂಗೋಡ್ಲು ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರ ಪಿ.ಎಸ್.ಪುಣಿಂಚಿತ್ತಾಯ, ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದ ಟ್ರಸ್ಟಿ ಮಾಲಿಂಗು ನಾಯರ್, ಉದ್ಯಮಿ ಶಶಿಧರ ಶೆಟ್ಟಿ ನಿಟ್ಟೆ ಮೊದಲಾದವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಶ್ರದ್ಧಾ ಹೊಳ್ಳ ಮುಳಿಯಾರು ಅವರ ಕವನ ಸಂಕಲನ `ಅಕ್ಷರ ದೀಪ' ಬಿಡುಗಡೆಗೊಳ್ಳಲಿದೆ.