ನವದೆಹಲಿ: ರಾಫೆಲ್ ಫೈಟರ್ ಜೆಟ್ ಒಪ್ಪಂದದ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆ ನಡೆಸಬೇಕೆಂಬ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ, ಅರುಣ್ ಶೌರಿ, ಸಾಮಾಜಿಕ ಕಾರ್ಯಕರ್ತ, ವಕೀಲ ಪ್ರಶಾಂತ್ ಭೂಷಣ್ ರಾಫೆಲ್ ಒಪ್ಪಂದದ ಕುರಿತು ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಈ ತೀರ್ಪಿನ ಮರುಪರಿಶೀಲಿನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
2018 ರ ಡಿ.14 ರಂದು ನೀಡಿದ್ದ ತೀರ್ಪನ್ನು ಮರುಪರಿಶೀಲಿಸಬೇಕೆಂಬ ಅರ್ಜಿಗಳ ತೀರ್ಪಿನ ಜೊತೆಗೆ, ಇದೇ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಯ ತೀರ್ಪನ್ನೂ ಸಹ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ರಾಫೆಲ್ ಪ್ರಕರಣದಲ್ಲಿ ಮೋದಿಯನ್ನು ಟೀಕಿಸುವ ಭರದಲ್ಲಿ ರಾಹುಲ್ ಗಾಂಧಿ ಅವಾವಶ್ಯಕವಾಗಿ ಸುಪ್ರೀಂ ಕೋರ್ಟ್ ನ್ನು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ವಿರುದ್ಧ ಮೀನಾಕ್ಷಿ ಲೇಖಿ ಮೊಕದ್ದಮೆ ದಾಖಲಿಸಿದ್ದರು. ಈಗ ಸುಪ್ರೀಂ ಕೋರ್ಟ್ ಗೆ ರಾಹುಲ್ ಗಾಂಧಿ ಬೇಷರತ್ ಕ್ಷಮೆ ಕೇಳಿದ್ದಾರೆ.