ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ಪ್ರಾಂತ್ಯ ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ.
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ನೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ. ಈ ಬೆನ್ನಲ್ಲೇ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಭಾರತದಲ್ಲಿ ತನ್ನ ಪ್ರಾಂತ್ಯ ಸ್ಥಾಪನೆಯನ್ನು ಘೋಷಿಸಿದೆ.
ಭಾರತದಲ್ಲಿ ಸ್ಥಾಪನೆಯಾಗಿರುವ ತನ್ನ ಹೊಸ ಪ್ರಾಂತ್ಯಕ್ಕೆ ವಿಲಾಯ್ಹ್ ಆಫ್ ಹಿಂದ್ ಎಂದು ಕರೆದುಕೊಂಡಿದ್ದು, ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಂಟುಮಾಡಿದ ಸಾವಿಗೆ ಹೊಣೆ ಹೊತ್ತುಕೊಂಡಿದೆ.