ಕಾಸರಗೋಡು: ಕೋಲ್ಕತ್ತದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರೋಡ್ ಶೋ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಹಿಂಸೆಯನ್ನು ಪ್ರತಿಭಟಿಸಿ ಕಾಸರಗೋಡು ನಗರದಲ್ಲಿ ಬುಧವಾರ ಸಂಜೆ ಬಿಜೆಪಿ ಕಾರ್ಯಕರ್ತರು ಬಾಯಿಗೆ ಬಟ್ಟೆ ಸುತ್ತಿ ಮೆರವಣಿಗೆ ನಡೆಸಿದರು.
ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮೆರವಣಿಗೆಯನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎ.ವೇಲಾಯುಧನ್ ಉದ್ಘಾಟಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಮಾತನಾಡಿದರು. ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಕಾರ್ಯದರ್ಶಿ ಎ.ಕೆ.ಕಯ್ಯಾರು, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಸುರೇಶ್, ಯುವಮೋರ್ಚಾ ರಾಜ್ಯ ಸಮಿತಿ ಸದಸ್ಯ ಧನಂಜಯ ಮಧೂರು ಮೊದಲಾದವರು ನೇತೃತ್ವ ನೀಡಿದರು.
ಕರಂದಕ್ಕಾಡ್ ಪರಿಸರದಿಂದ ಆರಂಭಿಸಿದ ಪ್ರತಿಭಟನೆ ಮೆರವಣಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ಟಿಎಂಸಿ ಕೃತ್ಯವನ್ನು ಖಂಡಿಸಲಾಯಿತು.