ಕಾಸರಗೋಡು: ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾನೂನು ಭಂಗ ಪ್ರಕರಣಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜೇಮ್ಸ್ ಜೋಸೆಫ್ ತಿಳಿಸಿದರು.
ಕೆಲವು ಪುಟ್ಟ ಘಟನೆಗಳನ್ನು ಬೃಹತ್ತಾಗಿಸಿ ಪ್ರಚಾರ ನಡೆಸಿ, ಶಾಂತಿಭಂಗಕ್ಕೆ ಸಮಾಜದ್ರೋಹಿಗಳು ಯತ್ನ ನಡೆಸುತ್ತಿದ್ದಾರೆ. ಈ ಘಟನೆಗಳನ್ನು ರಾಜಕೀಯ-ಕೋಮು ಗಲಭೆಗಳಾಗಿ ಮಾರ್ಪಡಿಸಲು ಗೂಢಾಲೋಚನೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳನ್ನು ಇದಕ್ಕೆ ವೇದಿಕೆಯಾಗಿ ಬಳಸಲಾಗುತ್ತಿದೆ. ಇಂಥಾ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ಠಾಣೆಗಳಿಗೆ ಆದೇಶ ನೀಡಲಾಗಿದೆ. ಈಗಾಗಲೇ ಇಂಥಾ ಪ್ರಕರಣಗಳಲ್ಲಿ ಶಾಮೀಲಾಗಿರುವವರ ಬಗ್ಗೆ ತೀವ್ರ ನಿಗಾ ಇರಿಸಲಾಗುತ್ತಿದೆ. ಅಗತ್ಯವಿದ್ದರೆ ಅವರನ್ನು ಜಾಗ್ರತೆಯ ಹಿನ್ನೆಲೆಯಲ್ಲಿ ವಶಕ್ಕೆ ತೆಗೆದುಕೊಳ್ಳುವ ಸಹಿತ ಕ್ರಮ ಕೈಗೊಳ್ಳಲಾಗುವುದು. ರಾತ್ರಿ ಕಾಲ ವಾಹನಗಳ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಎಸ್ಪಿ ತಿಳಿಸಿರುವರು.