ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ.ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರನ್ನು, ದೇಶದ ಮತದಾರರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಮೋದಿ ಅವರೊಂದಿಗೆ ಕೆಲವು ಹಿರಿಯ ಕೇಂದ್ರ ಸಚಿವರು ಸೇರಿದಂತೆ ಪಕ್ಷದ ಉನ್ನತ ನಾಯಕರು ಸಂಸದೀಯ ಮಂಡಳಿಯ ಸದಸ್ಯರೂ ಈ ಸಭೆಯಲ್ಲಿ ಹಾಜರಾಗಲಿದ್ದಾರೆ.
ಪಕ್ಷವು ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಧನ್ಯವಾದ ಹೇಳಲು ಜೊತೆಗೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಮರಳುವ ಕುರಿತು ಘೋಷಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎನ್ನಲಾಗಿದೆ. ಕಾರ್ಯಕ್ರಮದಲ್ಲಿ ಲಕ್ಷ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.