ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಮಂಗಳವಾರ ನಡೆದ ಗ್ರೆನೇಡ್ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾ ಪೊಲೀಸ್ ಠಾಣೆ ಮೇಲೆ ಉಗ್ರಗಾಮಿಗಳು ಗ್ರೆನೇಡ್ ಎಸೆದಿದ್ದಾರೆ.ಗ್ರೆನೇಡ್ ದಾಳಿಯಿಂಡ 10 ಮಂದಿ ಗಾಯಗೊಂಡಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೋಲೀಸರು ಹೇಳೀದ್ದಾರೆ.
ತೀವ್ರವಾಗಿ ಗಾಯಗೊಂಡ ಮೂರು ನಾಗರಿಕರನ್ನು ಶ್ರೀನಗರದಲ್ಲಿ ವಿಶೇಷ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಸ್ಥಳದಲ್ಲಿ ಸೇನಾಪಡೆಗಳು ಶೋಧಕಾರ್ಯಾಚರಣೆ ನಡೆಸುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.