ಕುಂಬಳೆ: ಆರಿಕ್ಕಾಡಿ ಶ್ರೀ ಮಲ್ಲಿಕಾರ್ಜುನ ಮತ್ತು ಕೋಟೆ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಏಪ್ರಿಲ್ 19 ರಿಂದ 25 ರ ತನಕ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತ್ತು. ಇದರ 48 ನೇ ದಿನದ ವೈದಿಕ ಕಾರ್ಯಕ್ರಮವಾದ ದೃಢಕಲಶ ಮತ್ತು ಶ್ರೀ ಮಲ್ಲಿಕಾರ್ಜುನ ಮತ್ತು ಕೋಟೆ ಶ್ರೀ ವೀರಾಂಜನೇಯ ದೇವರ ಹಾಗು ಪರಿವಾರ ದೇವರುಗಳ ವಿಶೇಷ ಪೂಜೆಯು ಜೂ.10 ರಂದು ಸೋಮವಾರ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಜರಗಲಿದೆ. ಬೆಳಿಗ್ಗೆ 7 ರಿಂದ ವಿವಿಧ ವಿಧಿವಿಧಾನಗಳು ಪ್ರಾರಂಭಗೊಂಡು ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಆರಿಕ್ಕಾಡಿಯಲ್ಲಿ ದೃಢಕಲಶ 10 ರಂದು
0
ಜೂನ್ 07, 2019