ಕಾಸರಗೋಡು: ಇತಿಹಾಸ ಪ್ರಸಿದ್ಧ ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬ್ರಹ್ಮ ಕಲಶ ಸಮಿತಿಯ ಲೆಕ್ಕಪತ್ರ ಮಂಡನೆ ಹಾಗು ಲೋಕ ಕಲ್ಯಾಣಾರ್ಥ ಶತರುದ್ರಾಭಿಷೇಕ ಜೂ.16 ರಂದು ಭಾನುವಾರ ನಡಯಲಿದೆ.
ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11 ಗಂಟೆಗೆ ಶತರುದ್ರಾಭಿಷೇಕ, 11.30 ಮಹಾಪೂಜೆಯ ಬಳಿಕ ಅನ್ನಪ್ರಸಾದ ವಿತರಣೆ ಜರಗಲಿದೆ. ಬೆಳಿಗ್ಗೆ 9.30 ಕ್ಕೆ ಬ್ರಹ್ಮಕಲಶ ಸಮಿತಿಯ ಮಹಾಸಭೆಯಲ್ಲಿ ಬ್ರಹ್ಮಕಲಶ ಸಮಿತಿಯ ವರದಿ ಮತ್ತು ಲೆಕ್ಕ ಪತ್ರ ಮಂಡನೆಯಾಗಲಿದೆ. ಬ್ರಹ್ಮಕಲಶ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಉಪಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ವಿಭಾಗ ಸಮಿತಿಯ ಎಲ್ಲಾ ಕಾರ್ಯಕರ್ತರು ಹಾಗು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ಷೇತ್ರದ ಮುಂದಿನ ಕಾಮಗಾರಿ ಕೆಲಸಗಳಿಗೆ ಸೂಕ್ತ ಸಲಹೆ ಸಹಕಾರಗಳನ್ನು ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.