ಕಾಸರಗೋಡು: ಕೋಟೆಕಣಿಯ ಶ್ರೀ ರಾಮದಾಥ ಸಾಂಸ್ಕøತಿಕ ಭವನ ಸಮಿತಿ ಆಶ್ರಯದಲ್ಲಿ ಜು.1 ರಂದು ಸಂಜೆ 5 ರಿಂದ ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕಾಸರಗೋಡು ಸರಕಾರಿ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕಿ ಡಾ|ಯು.ಮಹೇಶ್ವರಿ ಅವರು ಅಧ್ಯಕ್ಷತೆ ವಹಿಸುವರು. ಸಾಹಿತಿ, ಪತ್ರಕರ್ತ ವಿರಾಜ್ ಅಡೂರು ಅವರು ಕನ್ನಡ ಪತ್ರಿಕೋದ್ಯಮ ನಡೆದು ಬಂದ ದಾರಿ ಎಂಬ ವಿಷಯದಲ್ಲಿ ಮಾತನಾಡುವರು. ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಮತ್ತು ಪತ್ರಕರ್ತೆ ಸಾಯಿಭದ್ರ ರೈ ಅವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಅಚ್ಯುತ ಚೇವಾರು ಅವರನ್ನು ಗೌರವಿಸಲಾಗುವುದು.