ಮಂಜೇಶ್ವರ: ಭಾಷಾ ಅಲ್ಪಸಂಖ್ಯಾತ ಪ್ರದೇಶ ಕಾಸರಗೋಡಿನ ಕನ್ನಡಿಗರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಸರಕಾರ ಹಾಗು ಅಧಿಕಾರಿಗಳ ಗಮನ ಸೆಳೆಯಲು ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಜೂನ್ 22 ರಂದು ಬೆಳಿಗ್ಗೆ 10 ರಿಂದ ಕಾಸರಗೋಡು ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ನಡೆಯಲಿರುವ ಸತ್ಯಾಗ್ರಹವನ್ನು ಯಶಸ್ವಿಗೊಳಿಸಲು ವರ್ಕಾಡಿ ಪಂಚಾಯತಿ ಕನ್ನಡ ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪ್ರಾದೇಶಿಕ ಸಮಿತಿ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಾದೇಶಿಕ ಸಮಿತಿಯ ಅಧ್ಯಕ್ಷ ಸತ್ಯನಾರಾಯಣ ಮಾಸ್ತರ್ ಹಾಗು ಪ್ರಧಾನ ಕಾರ್ಯದರ್ಶಿ ಪಾರ್ವತಿ ದಿನೇಶ್ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.