ಬದಿಯಡ್ಕ: ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ಜಾನಪದ ಮೇಳ ಮತ್ತು ಕನ್ನಡ ಮಾಧ್ಯಮ ಶಾಲೆಗಳಿಗೆ ಉಚಿತ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.22 ರಂದು ಶನಿವಾರ ಬೆಳಿಗ್ಗೆ 10 ರಿಂದ ಬದಿಯಡ್ಕದ ಗುರುಸದನ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕರ್ನಾಟಕ ಸರಕಾರದ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಉದ್ಘಾಟಿಸುವರು. ಕರ್ನಾಟಕ ಸರಕಾರದ ಕೌಶಲಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಹಾಗೂ ಧಾರ್ಮಿಕ ದತ್ತಿ ಇಲಾಖಾ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಅವರು ಪುಸ್ತಕ ವಿತರಣೆ ಉದ್ಘಾಟಿಸುವರು. ಕರ್ನಾಟಕ ಸರಕಾರದ ವಿಧಾನ ಪರಿಷತ್ತು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ವಸುಂಧರಾ ಭೂಪತಿ. ಕಸಾಪ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಬದಿಯಡ್ಕ ಗ್ರಾ.ಪಂ. ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್, ಜಿ.ಪಂ.ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್, ಯಕ್ಷಧ್ರುವ ಪಟ್ಲ ಪೌಂಡೇಶನ್ ಕುಂಬಳೆ ಘಟಕಾಧ್ಯಕ್ಷ ಎಸ್.ಜಗನ್ನಾಥ ಶೆಟ್ಟಿ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸುವರು. ಈ ಸಂದರ್ಭ ವಿವಿಧ ಜಾನಪದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.