ಮುಳ್ಳೇರಿಯ: ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ವಿವಿಧ ಸಮಸ್ಯೆಗಳ ಬಗ್ಗೆ ಕೇರಳ ಸರಕಾರದ ಗಮನ ಸೆಳೆಯಲು ಕಾಸರಗೋಡು ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಜೂನ್ 22 ರಂದು ಬೆಳಿಗ್ಗೆ 10 ಗಂಟೆಯಿಂದ ಕಾಸರಗೋಡು ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ನಡೆಯಲಿರುವ ಪ್ರತಿಭಟನಾ ಸತ್ಯಾಗ್ರಹವನ್ನು ಯಶಸ್ವಿಗೊಳಿಸಲು ಕನ್ನಡ ಸಂಘ ಬಂದಡ್ಕ ಇದರ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಭಾಷಾಭಿಮಾನಿಗಳು ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಮ್ಮ ಬೇಡಿಕೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆಯುವ ಕೆಲಸ ಆಗಬೇಕಾಗಿದೆಯೆಂದು ಪದಾಧಿಕಾರಿಗಳು ತಿಳಿಸಿದರು. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಬಂದಡ್ಕ ಪ್ರದೇಶದಿಂದ ಅಪಾರ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.