ಮಧೂರು: ಮಧೂರು ಪಂಚಾಯತಿ ಬಂಟರ ಸಂಘದ ವತಿಯಿಂದ ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸ್ವಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಉನ್ನತ ಶಿಕ್ಷಣ ಪಡೆಯಲು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.23 ರಂದು ಭಾನುವಾರ ಶಿರಿಬಾಗಿಲು ಪುಳ್ಕೂರು ಶ್ರೀ ಮಹಾದೇವ ದೇವಸ್ಥಾನದ ಸಭಾ ಮಂಟಪದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವುದು.
ಸಮಾರಂಭದಲ್ಲಿ ಹುಡ್ಕೋದ ಸಲಹಾ ಸಮಿತಿ ಸದಸ್ಯ ಹಾಗು ಉದ್ಯಮಿ ಕೆ.ಆರ್.ಆಳ್ವ ಕೋಟೆಕುಂಜ ಕಂಬಾರ್ ಹಾಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಲಯ ಸಂಘದ ಅಧ್ಯಕ್ಷ ಸುಬ್ಬಣ್ಣ ಆಳ್ವ ಕುಚ್ಚಿಕ್ಕಾಡು, ಕೋಶಾಧಿಕಾರಿ ಅಶೋಕ ರೈ ಸೂರ್ಲು ಅತಿಥಿಗಳಾಗಿರುವರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅವರ ಹೆತ್ತವರು ಮತ್ತು ಸಮಾಜ ಬಾಂಧವರು ಭಾಗವಹಿಸಬೇಕೆಂದು ಅಧ್ಯಕ್ಷ ರಾಮಕೃಷ್ಣ ಆಳ್ವ ಮತ್ತು ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್ ಶೆಟ್ಟಿ ವಿನಂತಿಸಿದ್ದಾರೆ.