ಅಯೋಧ್ಯೆ: 17 ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭಕ್ಕೂ ಮೊದಲು ಶಿವಸೇನೆಯ ಸಂಸದರು ಭಾನುವಾರ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಮಾಡಿದ್ದಾರೆ.
ಅಯೋಧ್ಯೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ರಾಮ ಮಂದಿರ ಅತಿ ಶೀಘ್ರವೇ ನಿರ್ಮಾಣವಾಗಲಿದೆ ಎಂಬುದು ನಮ್ಮ ವಿಶ್ವಾಸ. ಸರ್ಕಾರ ಅಗತ್ಯವಾದರೆ ರಾಮಮಂದಿರಕ್ಕಾಗಿ ಸುಗ್ರೀವಾ ಜ್ಞೆ ಜಾರಿಗೊಳಿಸಬೇಕೆಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ಮಾಡಲು ಪ್ರಧಾನಿ ಮೋದಿ ಅವರಿಗೆ ಧೈರ್ಯ ಇದೆ. ಇಡೀ ಜಗತ್ತಿನಾದ್ಯಂತ ಇರುವ ಹಿಂದೂಗಳು ಅವರ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಉದ್ಧವ್ ಠಾಕ್ರೆ ಇದೇ ವೇಳೆ ಹೇಳಿದ್ದಾರೆ.