ಉಪ್ಪಳ: ಅಂತಾರಾಷ್ಟ್ರೀಯ ಯೋಗ ದಿನವನ್ನು ಕುರುಡಪದವು ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಶಾಲೆಯಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಡಲು ಆಗಮಿಸಿದ್ದ ಯೋಗ ಗುರು ವೆಂಕಟರಾಯ ಕಲ್ಲಡ್ಕ ಅವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಪೈವಳಿಕೆಯ ಆಯುಷ್ ಆಯುರ್ವೇದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಣೇಶ್ ಕುಮಾರ್ ಅವರು ಮಾತನಾಡಿ, ಯೋಗ ಜಗತ್ತಿಗೆ ಭಾರತವು ನೀಡಿರುವ ಮಹಾನ್ ಕೊಡುಗೆಗಳಲ್ಲಿ ಪ್ರಮುಖವಾದುದು. ಶಾರೀರಿಕ, ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿ ಯೋಗ ಮಹತ್ತರವಾಗಿದೆ. ಒತ್ತಡದ ಬದುಕಿನ ಜೀವನ ಶೈಲಿಗೆ ಯೋಗ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು.
ಯೋಗ ತರಬೇತುದಾರ ವೆಂಕಟರಾಯ ಕಲ್ಲಡ್ಕ ಯೋಗ ಪ್ರಾತ್ಯಕ್ಷಕೆ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಕ ವಿಜಯ ವಿಠಲ ಸ್ವಾಗತಿಸಿ, ಸಹ ಶಿಕ್ಷಕಿ ಕಾವ್ಯ ವಂದಿಸಿದರು. ಸಹ ಶಿಕ್ಷಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರೂ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.