ಉಪ್ಪಳ: ಪ್ರಸಕ್ತ ವರ್ಷದ ವಿಶ್ವಯೋಗದಿನವನ್ನು ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ಶುಕ್ರವಾರ ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರಾವಣ್ಯಾ ಇವರ ಪ್ರಾರ್ಥನೆಯ ಬಳಿಕ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ರಾಮಚಂದ್ರ ಚೆರುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಶಾಲಾ ಶಿಕ್ಷಕಿ ಪ್ರಪುಲ್ಲಾ ಶುಭಾಶಂಸನೆಗೈದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕಿ ವಾರಿಜಾ ವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಸೂರ್ಯನಮಸ್ಕಾರ ಹಾಗೂ ಯೋಗಾಸನ ಪ್ರದರ್ಶನವನ್ನು ನೀಡಿದರು. ವಿದ್ಯಾರ್ಥಿನಿ ಕುಮಾರಿ ಶಮಾ ಯೋಗದಿನದ ಮಹತ್ವದ ಕುರಿತಾಗಿ ಮಾಹಿತಿ ನೀಡಿದರು.
ಶಾಲಾ ಶಿಕ್ಷಕಿ ಸುಮಾ ಸ್ವಾಗತಿಸಿ, ರೂಪಾ ವಂದಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.