ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತಿ ಜನಪರ ಯೋಜನೆ 2018-19 ವರ್ಷದಲ್ಲಿ ನಿರ್ಮಿಸಿದ 6ನೇ ಅಂಗನವಾಡಿ ಕಟ್ಟಡದ ಉದ್ಘಾಟನೆ ಬುಧವಾರ ಜರುಗಿತು.
ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಿದರು. ವರ್ಕಾಡಿ ಗ್ರಾಮಪಂಚಾಯತಿ ಅಧ್ಯಕ್ಷ ಅಬ್ದುಲ್ ಮಜೀದ್ ಬಿ.ಎ.ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷೆ ಮಮತಾ ದಿವಾಕರ್, ವರ್ಕಾಡಿ ಗ್ರಾಮಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷೆ ತುಳಸಿ ಕುಮಾರಿ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷೆ ಫಾತಿಮತ್ ಸುಹರಾ ಮಾಂಕೋಡಿ, ಬ್ಲಾಕ್ ಪಂಚಾಯತಿ ಸದಸ್ಯರಾದ ಸದಾಶಿವ, ಆಶಾಲತಾ ಬಿ.ಎಂ., ವರ್ಕಾಡಿ ಗ್ರಾಮಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷೆ ರಹಮತ್ ರಝಾಕ್, ಸದಸ್ಯ ವಸಂತ್ ಎಸ್., ಮಂಜೇಶ್ವರ ಬ್ಲಾಕ್ ಪಂಚಾಯತಿ ಕಾರ್ಯದರ್ಶಿ ಸುರೇಂದ್ರನ್ ಎನ್., ಮಂಜೇಶ್ವರ ಐ.ಸಿ.ಡಿ.ಎಸ್. ಮೇಲ್ವಿಚಾರಕಿ ಅಜಿತಾ ಟಿ., ಷೀಬಾ ಮೊದಲಾದವರು ಉಪಸ್ಥಿತರಿದ್ದರು.