ಮುಂಬೈ: ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನೇವಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಲಂಡನ್ ನಲ್ಲಿ ತುರ್ತು ಲ್ಯಾಂಡ್ ಆದ ಘಟನೆ ಗುರುವಾರ ನಡೆದಿದೆ.
ಮುಂಬೈ-ನೇವಾರ್ಕ್ ನಡೆವೆ ಸಂಚರಿಸುವ ಏರ್ ಇಂಡಿಯಾ ವಿಮಾನ ಎಂದಿನಂತೆ ಹಾರಾಟ ಆರಂಭಿಸಿತ್ತು. ಆದರೆ, ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಲಂಡನ್ ನಲ್ಲಿ ಲ್ಯಾಂಡ್ ಮಾಡಲಾಗಿದೆ ಎಂದು ಏರ್ ಇಂಡಿಯಾ ಟ್ವೀಟ್ ಮಾಡಿತ್ತು.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.