ಮಂಜೇಶ್ವರ: ಕುಂಜತ್ತೂರು ಸರಕಾರಿ ಫ್ರೌಢಶಾಲೆಯಲ್ಲಿ ಕಲಿಕೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಇತ್ತೀಚೆಗೆ ನಡೆಯಿತು.
2018-19ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಅಂತಿಮ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ಶ್ವೇತಾ ಹಾಗೂ ಸಾಪ್ಟ್ ಬಾಲ್ ಕ್ರೀಡಾ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಸೈಫಾನ್ ಸಾಬ್ ಕಜೆ, ಸಾಬ್ ಶೇಕ್ ಎಂಬ ವಿದ್ಯಾರ್ಥಿಗಳನ್ನು ಸ್ಮರಣಿಕೆ, ಪ್ರಮಾಣ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶರಣ್ಯ, ಹರ್ಷಿತ, ಶೈಫಾ, ನೈಮ, ಸುಜನ್, ಮುನಾವರ್, ತೈಷೀನ ನಿಯಾಫ್ ಎಂಬ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗ್ರೌರವಿಸಲಾಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಯೋಗೀಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಬಾಲಕೃಷ್ಣ ಜಿ.ಅಭಿನಂದನಾ ಭಾಷಣಗೈದರು. ಹೈಯರ್ ಸೆಕೆಂಡರಿ ಪ್ರಾಂಶುಪಾಲ ಶಿಶುಪಾಲ, ಹಿರಿಯ ಶಿಕ್ಷಕಿ ಪ್ರಮೀಳಾ ಕುಮಾರಿ, ಶಿಕ್ಷಕಿ ಕನಕ, ದೈಹಿಕ ಶಿಕ್ಷಕಿ ಅನಿತಾ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು. ಶಿಕ್ಷಕ ರವೀಂದ್ರ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಅಶ್ರಫ್ ವಂದಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಬಾಪಕುಂಞÂ, ವಿದ್ಯಾರ್ಥಿಗಳ ಹೆತ್ತವರು, ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.