ಶಾಂಘೈ: ಭಾರತ-ಚೀನಾ ಪರಸ್ಪರ ಅಪಾಯ ಒಡ್ಡುವುದಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಹೇಳಿದ್ದಾರೆ.
ಶಾಂಘೈ ಸಹಕಾರ ಸಭೆಯ ಪಾಶ್ರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಭಾರತ- ಚೀನಾ ಪರಸ್ಪರ ಎಂದಿಗೂ ಅಪಾಯ ಒಡ್ಡುವುದಿಲ್ಲ, ಚೀನಾ ಭಾರತದೊಂದಿಗಿನ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಬಯಸುತ್ತಿದೆ ಎಂದು ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಪ್ರಧಾನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.