HEALTH TIPS

ನಾಲಂದಾ ವಿದ್ಯಾಲಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಹಾಗೂ ಮಾದಕ ವಸ್ತು ವಿರುದ್ದ ದಿನಾಚರಣೆ

 
       ಪೆರ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ಘಟಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾಸರಗೋಡು ಘಟಕ ಮತ್ತು ನಾಲಂದ ಮಹಾವಿದ್ಯಾಲಯ ಪೆರ್ಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತು ವಿರುದ್ದ ದಿನಾಚರಣೆಯ ಅಂಗವಾಗಿ ಬುಧವಾರ ವಿದ್ಯಾಲಯದಲ್ಲಿ ದುಶ್ಚಟ ನಿರ್ಮೂಲನೆ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಹಾಗೂ ಅಂತರಾಷ್ಟ್ರೀಯ ಮಾದಕ ವಸ್ತು ದಿನಾಚರಣೆ ಆಚರಿಸಲಾಯಿತು.
    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ನಿರ್ದೇಶಕ ಸತೀಶ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಜನೆಯ ಉದ್ದೇಶವನ್ನು ಸಮಗ್ರವಾಗಿ ವಿವರಿಸಿದರು. ಹದಿಹರೆಯದ ಕುತೂಹಲ, ಹಠಗಳಂತಹ ಸ್ವಭಾವಗಳಿಂದ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಇಂದು ವ್ಯಾಪಕಗೊಂಡಿದೆ.ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಲ್ಲಿ ಸ್ವಾಸ್ಥ್ಯ ಸಂಕಲ್ಪದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಅವರು ಈ ಸಂದರ್ಭ ತಿಳಿಸಿದರು. ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಹೆಚ್ಚು ಗಮನಹರಿಸುವ ಮೂಲಕ ವಿದ್ಯಾವಂತರಾಗಿ, ಸತ್ಪ್ರಜೆಗಳಾಗಿ ಬಾಳಬೇಕು ಎಂದು ಕರೆನೀಡಿದರು.
     ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್‍ಬಾಘ್ ವಹಿಸಿದ್ದರು. ಜಿಲ್ಲಾ ಪಂಚಾಯತಿ ಸದಸ್ಯೆ ಪುಷ್ಪಾ ಅಮೆಕ್ಕಳ, ನಾಲಂದಾ ಕಾಲೇಜಿನ ಸಹಾಯಕ ಪ್ರಾಂಶುಪಾಲ ಕೇಶವ ಶರ್ಮಾ, ಜನಜಾಗೃತಿ ವೇದಿಕೆ ಸದಸ್ಯ ಬಿ.ಪಿ.ಶೇಣಿ, ಮಾಜಿ ಜಿಲ್ಲಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ಹರೀಶ್ ಶೆಟ್ಟಿ ಕಡಂಬಾರ್, ದಿನೇಶ್ ಚೆರುಗೋಳಿ, ಬಾಲಕೃಷ್ಣ ರೈ, ನಾರಾಯಣ ಮಾಟೆ ಉಪಸ್ಥಿತರಿದ್ದು ಶುಭಹಾರೈಸಿದರು.
    ಪೆರ್ಲ ಸತ್ಯನರಾಯಣ ಫ್ರೌಢಶಾಲಾ ಶಿಕ್ಷಕ ಉಮೇಶ್ ಮಾಸ್ತರ್ ಪೆರ್ಲ, ಶರೀಫ್ ಕೊಡವಂಜಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ದುಶ್ಚಟಗಳ ಅಡ್ಡಪರಿಣಾಮಗಳ ಬಗ್ಗೆ ಜಾಗೃತಿ ತರಗತಿ ನಡೆಸಿದರು.
     ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ.ಸ್ವಾಗತಿಸಿ, ವಂದಿಸಿದರು. ಮೇಲ್ವಿಚಾರಕಿ ವಿನುತಾ ಕಾರ್ಯಕ್ರಮ ನಿರೂಪಿಸಿದರು. ವಲಯದ ಸೇವಾ ಪ್ರತಿನಿಧಿಗಳು ಸಹಕರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries