ಬದಿಯಡ್ಕ: ಊರಿನ ಶಾಲೆಗಳು ವಿದ್ಯಾದೇಗುಲಗಳಾಗಿವೆ. ಸಮಗ್ರವಾದ ಶಿಕ್ಷಣಗಳು ಲಭಿಸುವಂತಹ ಇಂತಹ ಶಾಲೆಗಳನ್ನು ಉಳಿಸಿಕೊಳ್ಳುವ ಮಹತ್ತರವಾದ ಹೊಣೆ ಊರವರಿಗಿದೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸಿ ಕನ್ನಡದ ಉಳಿವಿಗಾಗಿ ಶ್ರಮಿಸಬೇಕು ಎಂದು ಕುಂಬ್ಡಾಜೆ ಗ್ರಾಮಪಂಚಾಯತ್ ಸದಸ್ಯ ಶಶಿಧರ ತೆಕ್ಕೆಮೂಲೆ ಅಭಿಪ್ರಾಯಪಟ್ಟರು.
ಗುರುವಾರ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಕಿರಿಯ ಪ್ರಾಥಮಿಕ ಶಾಲೆಯ 2019-20ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಊರಿನ ಶಾಲೆಗಳು ಪ್ರಧಾನ ಪಾತ್ರವಹಿಸುತ್ತವೆ. ಮಕ್ಕಳ ಕೇವಳ ಪುಸ್ತಕದ ಹುಳುಗಳಾಗಿರಬಾರದು, ಎಲ್ಲಾ ಚಟುವಟಿಕೆಗಳಲ್ಲೂ ಭಾಗಿಯಾಗಬೇಕು. ಗ್ರಾಮೀಣ ಶಾಲೆಗಳು ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಕಾರ್ಯಾಚರಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಲಾ ವ್ಯವಸ್ಥಾಪಕ ರಾಧಾಕೃಷ್ಣ ಭಟ್ ಬಳ್ಳಪದವು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಅಗಲ್ಪಾಡಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ವಾಸುದೇವ ಭಟ್ ಉಪ್ಪಂಗಳ, ಗ್ರಾ.ಪಂ. ಸದಸ್ಯೆ ಶಾಂತಾ ಎಸ್. ಭಟ್, ರಾಮ ಮಾಸ್ತರ್ ಪಿಲಾಂಕಟ್ಟೆ, ಮಾತೃಸಂಘದ ಅಧ್ಯಕ್ಷೆ ಮಾಳವಿಕಾ, ಗ್ರಾಮವಿಕಾಸ ಸಮಿತಿಯ ಅಧ್ಯಕ್ಷ ಸುಬ್ರಾಯ ಭಟ್ ಶುಭಾಶಂಸನೆಗೈದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಭಟ್ ಸ್ವಾಗತಿಸಿ, ಅಧ್ಯಾಪಿಕೆ ಸುಜಯ ಬಿ. ವಂದಿಸಿದರು. ಅಧ್ಯಾಪಿಕೆ ಸೌಮ್ಯ ಕುಮಾರಿ ಕಾರ್ಯಕ್ರಮ ನಿರೂಪಣೆಗೈದರು. ಶಾಲಾ ಮಕ್ಕಳನ್ನು ಮೆರವಣೆಗೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿ ಹಬ್ಬದ ಕಳೆಯನ್ನು ಸೃಷ್ಟಿಸಲಾಯಿತು.
………………………………………………………………………………………………………………………………….
ನರೇಂದ್ರ ಮೋದಿಯರು ಭಾರತದ ಪ್ರಧಾನಿಯಾದ ಹಿನ್ನೆಲೆಯಲ್ಲಿ ಕಳೆದ ಐದು ವರ್ಷಗಳಿಂದ ಶಾಲೆಯ ಎಲ್ಲಾ ಮಕ್ಕಳಿಗೂ ಉಬ್ರಂಗಳ ಗ್ರಾಮ ವಿಕಾಸ ಸಮಿತಿಯ ವತಿಯಿಂದ ನೀಡುತ್ತಿದ್ದ ಶೈಕ್ಷಣಿಕ ಪರಿಕರಗಳನ್ನು ಈ ಬಾರಿಯೂ ನೀಡಲಾಯಿತು. ಇದಲ್ಲದೆ ಡಾ.ರಾಜೇಶ್ ಪಿ.ಜೋಸ್ ಪಂಜರಿಕೆ ಹಾಗೂ ಶಾಲಾ ಶಿಕ್ಷಕ ವೃಂದದ ವತಿಯಿಂದ ಪುಸ್ತಕ ಹಾಗೂ ಕೊಡೆಗಳನ್ನು ವಿತರಿಸಲಾಯಿತು.