ನವದೆಹಲಿ: ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದಕ್ಕಾಗಿ ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಟೀಕಿಸಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕ್ಲಾಸ್ ತೆಗೆದುಕೊಂಡಿದ್ದಾರೆ.
ಗಿರಿರಾಜ್ ಸಿಂಗ್ ಗೆ ಎಚ್ಚರಿಕೆ ನೀಡಿರುವ ಗೃಹ ಸಚಿವ ಶಾ, ಈ ರೀತಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗಬಾರದು ಎಂಬ ಎಚ್ಚರಿಕೆಯನ್ನೂ ಅಮಿತ್ ಶಾ ನೀಡಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಟ್ವೀಟ್ ಮಾಡಿದ್ದ ಗಿರಿರಾಜ್ ಸಿಂಗ್, ಇಷ್ಟೇ ಉತ್ಸಾಹದಿಂದ ನವರಾತ್ರಿ ಭೋಜನವನ್ನು ಆಯೋಜಿಸಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು, ನಾವು ನಮ್ಮ ಆಚರಣೆಗಳನ್ನು ಬಿಟ್ಟು ತೋರಿಕೆ ಮೊರೆ ಹೋಗುತ್ತೆವೆ ಏಕೆ ಎಂದು ಸಿಂಗ್ ಪ್ರಶ್ನಿಸಿದ್ದಾರೆ.