ಮಂಜೇಶ್ವರ: ಕನಿಲ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ನೋಟರಿ ವಕೀಲ ನವೀನ್ ರಾಜ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಳಿಕ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಲಕ್ಷ್ಮಣ ಸಾಲಿಯಾನ್ ಹಾಗು ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪ್ಪರ ಅವರು ಸಂಘಗಳ ಅವಶ್ಯಕತೆಯ ಕುರಿತು ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಯಾದವ ಬಿ.ಎಂ, ಸಂಚಾಲಕ ದಯಾನಂದ ಎಂ, ವ್ಯವಸ್ಥಾಪಕ ಮನೋಜ್ ಕುಮಾರ್, ಸಹಾಯಕ ಮುಖ್ಯೋಪಾಧ್ಯಾಯಿನಿ ಮಾಲತಿ ಹಾಗು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳ ಅವರು ಸ್ವಾಗತಿಸಿ, ಶಾಲಾ ನಾಯಕ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರಫುಲ್ಲಾ ವಂದಿಸಿದರು.