ಉಪ್ಪಳ: ಬಾಯಾರು ಹೆದ್ದಾರಿ ಶಾಲಾ ಮಿತ್ರಮಂಡಳಿ ಗ್ರಂಥಾಲಯ ಮತ್ತು ವಾಚನಾಲಯದಿಂದ ವಿಶ್ವ ಪರಿಸರ ದಿನಾಚರಣೆ ಜರಗಿತು. ಸಭಾಧ್ಯಕ್ಷತೆಯನ್ನು ಗ್ರಂಥಾಲಯದ ಅಧ್ಯಕ್ಷ ಪಿ. ಗೋಪಾಲಕೃಷ್ಣ ಭಟ್ ವಹಿಸಿದ್ದರು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷ ಯಸ್. ನಾರಾಯಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹೆದ್ದಾರಿ ಶಾಲಾ ಮುಖ್ಯೋಪಾಧ್ಯಾಯ ಆದಿ ನಾರಾಯಣ ಭಟ್ ವಿಷಯ ಮಂಡನೆಗೈದರು. ಲೈಬ್ರರಿ ಕೌನ್ಸಿಲ್ ಸದಸ್ಯ ವೆಂಕಟರಮಣ ಆಚಾರ್ಯ ಅವರು ಶುಭಾಶಂಸನೆಗೈದರು. ಗ್ರಂಥಾಲಯದ ಕಾರ್ಯದರ್ಶಿ ಗೀತಾ ಸ್ವಾಗತಿಸಿದರು. ಬಳಿಕ ಸಸಿ ವಿತರಣಾ ಕಾರ್ಯಕ್ರಮ ಜರಗಿತು.
ಬಾಯಾರಿನಲ್ಲಿ ವಿಶ್ವ ಪರಿಸರ ದಿನಾಚರಣೆ
0
ಜೂನ್ 10, 2019